ಬೆಳಗಾವಿ:
ಬೆಳಗಾವಿಯ ಮಾಜಿ ಸೈನಿಕರು 26 ನೇ ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ.ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಗದೀಶ ಪೂಜಾರಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ 26 ರಂದು ಕಾರ್ಗಿಲ್ ವಿಜಯೋತ್ಸವದ ನಿಮಿತ್ಯವಾಗಿ ನಗರದ ಕಿಲ್ಲಾ ಸರ್ಕಲ್ ನಿಂದ ಧರ್ಮನಾಥ ಭವನದವರೆಗೆ ಬೈಕ್ ರ್ಯಾಲಿ ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಾಗ್ಮಿ ಹಾರಿಕಾ ಮಂಜುನಾಥ ಭಾಗಿಯಾಗಲಿದ್ದಾರೆ. ಅಲ್ಲದೆ ಜಿಲ್ಲೆಯ ಸಂಸದರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿಲಿದ್ದು ಆಪರೇಷನ್ ಸಿಂಧೂರದಲ್ಲಿ ಕೈಗಳನ್ನು ಕಳೆದುಕೊಂಡ ವೀರ ಸೈನಿಕನಿಗೆ ಅಂದು ಸೈನಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು. ಅಲ್ಲದೆ ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಬೆಳಗಾವಿ ಜಿಲ್ಲೆಯ ನಾಲ್ಕು ಜನ ಯೋಧರ ಕುಟುಂಬಗಳಿಗೆ ಗೌವರ ಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಈ ವೇಳೆ ಸಂಘದ ಗೌರವಾಧ್ಯಕ್ಷರು ಹಾಗೂ ನಿರ್ದೇಶಕರು ಹಾಗೂ ಮಾಜಿ ಸೈನಿಕರು ಉಪಸ್ಥಿತರಿದ್ದರು.


