Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಧಾರವಾಡಹಾವೇರಿ

  ಶಾಲಾ ಬಸ್ ಪಲ್ಟಿ: ಮಹಿಳೆ ಸಾವು, ಎಂಟು ಜನರಿಗೆ ಗಂಭೀರ ಗಾಯ

ಯಲ್ಲಾಪುರ:  ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ದ ಬಸ್, ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ
ಘಟನೆ  ಅರಬೈಲ್​ ಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ರಜೆ ಹಿನ್ನೆಲೆ ಪ್ರವಾಸ ಕೈಗೊಳ್ಳಲಾಗಿತ್ತು. ಅದರಂತೆ ಹುಬ್ಬಳಿಯಿಂದ ಅಂಕೋಲಾ‌ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ಘಟನೆಯಲ್ಲಿ ಕಸ್ತೂರಮ್ಮ ಎಂಬ 60 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
TV24 News Desk
the authorTV24 News Desk

Leave a Reply

error: Content is protected !!