ಬೆಳಗಾವಿ:
ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಶಾಲೆಯ ಮೇಲೆ ಮರ ಉರುಳಿ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಶಾಲೆ ಆರಂಭಕ್ಕೂ ಮುನ್ನವೇ ಮರ ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಮರ ಬಿದ್ದು ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಮೇಲ್ಚಾವಣಿ ಸಂಪೂರ್ಣ ಹಾಳಾಗಿವೆ. ಸ್ಥಳಕ್ಕೆ ಅರಣ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




