ಬೆಳಗಾವಿಬೆಳಗಾವಿ ನಗರ

ಬೆಳಗಾವಿಯಲ್ಲಿ ಬೃಹತ್ ಮಠಾಧೀಶರ ಚಿಂತನಾ ಸಮಾವೇಶ

ಬೆಳಗಾವಿ : ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವ ನಿಮಿತ್ಯ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಬೆಳಗಾವಿಯಲ್ಲಿ ಅದ್ಧೂರಿಯಾಗಿ ನೆರವೇರಿತು.ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

 ಸಮಾವೇಶದಲ್ಲಿ ವಿವಿಧ ಮಠಾಧೀಶರು ಭಾಗಿಯಾಗಿದ್ದರು.ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿರಿಗೆರೆ ತರಳಬಾಳು ಮಹಾಸಂಸ್ಥಾನ ಮಠದ ಜಗದ್ದುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ, ಮುಂಡರಗಿ ಅನ್ನದಾನೇಶ್ವರ ಸಂಸ್ಥಾನಮಠದ ಜಗದ್ಗುರು ನಾಡೋಜ ಡಾ.ಅನ್ನದಾನೇಶ್ವರ ಮಹಾಸ್ವಾಮಿಗಳು, ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು ಸೇರಿ ಇನ್ನಿತರ ಸ್ವಾಮೀಜಿಗಳು, ಗಣ್ಯರು ಭಾಗಿಯಾಗಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಪ್ರಭಾಕರ ಕೋರೆ ಕೇವಲ ಬೆಳಗಾವಿಗರಲ್ಲ. ಅವರ ಇಂದಿನ ದಿನ ಸಾಮಾಜಿಕ ಸೇವೆ ದೇಶದೆಲ್ಲೆಡೆ ಹರಡಿದೆ. ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕೆಎಲ್‍ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ ಸಾಕಷ್ಟು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಸದ್ದಿಲ್ಲದೆ ಸೇವಾ ಕಾರ್ಯ ಮಾಡುತ್ತಿರುವ ಪ್ರಭಾಕರ್ ಕೋರೆ ಸಾಮಾಜಿಕ ಜೀವನ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಗೊ.ರು.ಚನ್ನಬಸಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕೊಟ್ಟೂರು ಸ್ವಾಮೀಮಠದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಠಾಧೀಶರು, ಕೆಎಲ್‍ಇ ಸಂಸ್ಥೆಯ ಅಧ್ಯಕ್ಷರು ಮತ್ತು ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷರು, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ್, ಮಾಜಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಸೇರಿ ಹಲವಾರು ಗಣ್ಯರು ಭಾಗಿಯಾಗಿದ್ದರು

TV24 News Desk
the authorTV24 News Desk

Leave a Reply