ಕ್ರೈಂಜಿಲ್ಲೆಬೆಳಗಾವಿ ನಗರ

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವಳು ಮಸಣಕ್ಕೆ! ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ!

ಬೆಳಗಾವಿ;

ರಾರೋರಾತ್ರಿ ಬೆಳಗಾವಿಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಬೆಳಗಾವಿ ‌ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿಯಲ್ಲಿ ನಡೆದ ಘಟನೆಯಿಂದ ಇಡೀ ಬೆಳಗಾವಿ ಬೆಚ್ಚಿ ಬಿದ್ದಿದೆ.ಕೊಲೆಯಾದ ಮಹಿಳೆಯನ್ನು ಬೆಳಗಾವಿಯ ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಎಂದು ಗುರುತಿಸಲಾಗಿದೆ. ಮಹಿಳೆಯ ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೆಸ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಾದೇವಿ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ತಲೆಗೆ ರಾಡ್ ನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಾದೇವಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಹಲ್ಲೆಗೈದ ದಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ, ಡಿಸಿಪಿ ನಾರಾಯಣ ಭರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡದ ಸಿಬ್ಬಂಧಿಗಳು ಆಗಮಿಸಿದ್ದು ಮರಣೋತ್ತರ ಪರೀಕ್ಷೆಗಾಗಿ ಮಹಾದೇವಿಯ ಮೃತದೇಹವನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ರವಾಣಿಸಲಾಗಿದೆ. ಘಟನೆಯು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

TV24 News Desk
the authorTV24 News Desk

Leave a Reply