Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಚಾರಾಧಿನ  ಕೈದಿ ಸಾವು

ಬೆಳಗಾವಿ: ಬೆಳಗಾವಿ ಕಮಿಷನರ್ ವ್ಯಾಪ್ತಿಯ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಕರೆತರಲಾಗಿದ್ದ ಆರೋಪಿಯೊರ್ವ ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ(45)
ಗಾಂಜಾ ಪ್ರಕರಣದ ವಿಚಾರಣೆಗೆ ಈತನನ್ನು ಬೆಳಗಾವಿಗೆ ಕರೆತರುವಾಗ ಕಾಕತಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದೆವು. ಚೇತರಿಸಿಕೊಂಡ ನಂತರ, ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದೆವು.
ಈ ವೇಳೆ ಮತ್ತೆ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದೆವು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತನ  ಪತ್ನಿ ನೀಡಿದ ದೂರು ಆಧರಿಸಿ, ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ಒಪ್ಪಿಸಲಾಗುವುದು ಎಂದು ಡಿಸಿಪಿ ರವೀಂದ್ರ ಗದಾಡಿ ತಿಳಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!