ಬೆಳಗಾವಿ:
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಸರ್ಕಾರಿ ಬಸ್ ನ ಸ್ಟೇಯರಿಂಗ್ ರಾಡ್ ಕಟ್ಟಾಗಿ ಬಸ್ ಕಂದಕಕ್ಕಿಳಿದ ಘಟನೆ ನಡೆದಿದೆ. ಬೆಳಗಾವಿಯಿಂದ ಬೆಳಗುಂದಿಗೆ ಬಸ್ ಹೋಗುತ್ತಿದ್ದಾಗ ಘಟನೆ ನಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ ಒಟ್ಟು 35 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದ್ದು ಅದರಲ್ಲಿ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಬಸ್ ನಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













