



ಬೆಳಗಾವಿ:
ಕರ್ನಾಟಕದಲ್ಲಿಯೇ ನಿಂತು ಕರ್ನಾಟಕ ಸರ್ಕಾರಕ್ಕೆ ನಾಲಾಯಕ್ ಸರ್ಕಾರ ಎಂದು ಎಂಇಎಸ್ ನ ಮಹಾನುಭಾವರು ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಾನಗರ ಪಾಲಿಕೆಯಲ್ಲಿ ಕನ್ನಡ ಕಡ್ಡಾಯ ಆದೇಶ ಮಾಡಿದ್ದಕ್ಕೆ ಎಂಇಎಸ್ ಪುಂಡರಿಗೆ ಬುಡಕ್ಕೆ ಬೆಂಕಿ ಇಟ್ಟಂತಾಗಿದೆ. ಹೀಗಾಗಿ ಇಂದು ಎಂಇಎಸ್ ಭಂಡರು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಬೊಬ್ಬಿರಿದರು. ಪೊಲೀಸರ ಸಮ್ಮುಖದಲ್ಲಿಯೇ ಕರ್ನಾಟಕ ಸರ್ಕಾರಕ್ಕೆ ನಾಲಾಯಕ್ ಸರ್ಕಾರವೆಂದು ಎಂಇಎಸ್ ಪುಂಡರು ಘೋಷಣೆ ಕೂಗಿದರು.ಈಗಾಗಲೇ ಬೆಳಗಾವಿಯಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಎಂಇಎಸ್ ಕಳೆದುಕೊಂಡಿದೆ. ಸಧ್ಯ ಮಹಾನಗರ ಪಾಲಿಕೆಯಲ್ಲಿ ಕನ್ನಡ ಕಡ್ಡಾಯ ಆದೇಶ ಮಾಡಿದ್ದರಿಂದ ಅಸ್ತಿತ್ವಕ್ಕೆ ಬೆಂಕಿ ಇಟ್ಟಂತಾಗಿದೆ.ಹೀಗಾಗಿ ಇಂದು ಡಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಎಗರಾಡಿದ ಎಂಇಎಸ್ ಕಾರ್ಯಕರ್ತರು(ಪುಂಡರು)ಮಹಾನಗರ ಪಾಲಿಕೆಯಲ್ಲಿ ಕನ್ನಡ ಕಡ್ಡಾಯ ಮಾಡದಂತೆ ಕಿರಿಕ್ ತೆಗೆದಿದೆ. ಸಧ್ಯ ಮಹಾನಗರ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನ ಮಾಡಿರುವ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ಇದರ ವಿರುದ್ಧ ಹೇಗೆ ಪ್ರತಿಕ್ರಿಯಿಸುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.ಇನ್ನು ಕನ್ನಡಿಗರು ಈ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕರ್ನಾಟಕದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನ ಮಾಡ್ತಿದ್ದಾರೆಯೇ ಹೊರತು ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಲ್ವಲ್ಲ ಎಂದು ಮಾತನಾಡಿಕೊಳ್ತಿದ್ದಾರೆ.










