ಬೆಳಗಾವಿ:
ಬೆಳಗಾವಿಗಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಹಾಗೂ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯ್ತು.ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರು ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ಮಾಡಿ ಕಾಣದ ಕೈಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ ಆಯೋಜನೆ ಮಾಡಲಾಗಿತ್ತು,ಸರ್ಕಾರವೇ ರಚಿಸಿರೋ ಎಸ್.ಐ.ಟಿ ತನಿಖೆ ನಡೆಸುತ್ತಿದೆ ಈವರೆಗೂ ಈ ತನಿಖಾ ತಂಡ ಇನ್ನೂ ಸರ್ಕಾರಕ್ಕೆ ವರದಿಯೇ ಕೊಟ್ಟಿಲ್ಲ ಧರ್ಮಸ್ಥಳ ಮಂಜುನಾಥ ಸ್ವಾಮಿ, ಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ನಿರಾಧಾರ ಆರೋಪ ಮಾಡಲಾಗುತ್ತಿದೆ. ಗಿರೀಶ್ ಮಟ್ಟಣ್ಣವರ, ಮಹೇಶ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ, ಜಯಂತ ಟಿ ಸೇರಿ ಹಲವರು ಅಪ್ರಚಾರ ಮಾಡ್ತಿದ್ದಾರೆ.
ಧರ್ಮಸ್ಥಳ ಮತ್ತು ಹೆಗ್ಗಡೆ ಕುಟುಂಬದ ಬಗ್ಗೆ ಅಪಪ್ರಚಾರ ಮಾಡ್ತಿರೋರ ಬಗ್ಗೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಅಗ್ರಹಿಸಿದರು.ಇವರ ಹಿಂದೆ ಯಾರಿದ್ದಾರೇ, ಅವರಿಗೆ ಹಣದ ನೆರವು ಕೊಡ್ತಿರೋರು ಯಾರು ಎಂಬುದನ್ನ ತನಿಖೆ ಮಾಡಬೇಕು.
ಇವರ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡಬೇಕೆಂದು ಆಗ್ರಹ ಮಾಡಿದರು.ಕೈಯಲ್ಲಿ ಬಿತ್ತಿಪತ್ರ ಹಿಡಿದು ಧರ್ಮಸ್ಥಳ ಭಕ್ತಾಭಿಮಾನಿಗಳು ಆಕ್ರೋಶ ಹೊರ ಹಾಕಿದರು. ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು ಸಹ ಭಾಗಿಯಾಗಿದ್ದು ವಿಶೇಷವಾಗಿತ್ತು.













