ಜಿಲ್ಲೆಬೆಳಗಾವಿ

ಡೋಂಟ್ ವರಿ ರಾಜಾ ನಾಳೆಯೂ ನಿನಗೆ ರಜಾ!

ಬೆಳಗಾವಿ:

ಬೆಳಗಾವಿ ‌ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಾಳೆಯೂ ಸಹ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಮುಂದುವರೆಸಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪೂರ, ರಾಮದುರ್ಗ, ಸವದತ್ತಿ ತಾಲೂಕಿನ ಶಾಲಾ ಪದವಿ ಪೂರ್ವ ಕಾಲೇಜು ಹಾಗೂ ಅಂಗನಡವಾಡಿಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಏಳು ತಾಲೂಕುಗಳಿಗೆ ಡಿಸಿ ರಜೆ ನೀಡಿ ಆದೇಶ ಹೊರಡಿಸಿದ್ದರು. ಮಕ್ಕಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

TV24 News Desk
the authorTV24 News Desk

Leave a Reply