ಜಿಲ್ಲೆಬೆಳಗಾವಿ

ಮಲಪ್ರಭಾ ಜಲಾಶಯದಿಂದ 10 ಸಾವಿರ ಕ್ಯೂಸೇಕ್ ನೀರು ಬಿಡುಗಡೆ!

ಬೆಳಗಾವಿ:

ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶಗಳಲ್ಲಿ ಹಾಗೂ ಮಲಪ್ರಭಾ ನದಿಯ ಉಗಮಸ್ಥಾನದ ಆಯಕಟ್ಟಿನ ಸ್ಥಳಗಳಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಮಲಪ್ರಭಾ ನದಿಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.‌ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಇರುವ ನವಿಲು ತೀರ್ಥ ಜಲಾಶಯದಿಂದ ಸಧ್ಯ 10 ಸಾವಿರ ಕ್ಯೂಸೇಕ್ ನೀರು ಹರಿದು ಬಿಡಲಾಗುತ್ತಿದೆ. 2077.75 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸಧ್ಯ 2079.50 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ನೀರನ್ನು ಹರಿದು‌ ಬಿಡುತ್ತಿದ್ದು ನದಿ ತೀರದ ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ.ಅಲ್ಲದೇ ಪ್ರವಾಹ ಪೀಡಿತ ಸ್ಥಳಗಳಲ್ಲಿನ ಜನ ಜಾನುವಾರುಗಳನ್ನು ಶಿಫ್ಟ್ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

TV24 News Desk
the authorTV24 News Desk

Leave a Reply