ಬೆಳಗಾವಿ:
ಮನೆಯ ಮುಂದೆ ಕೂಗು ಹಾಕಿದ್ದಕ್ಕೆ ಯುವಕನನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದಿದ್ದ ಆಗಂತಕರನ್ನು ಪೊಲೀಸರು ಹೆಡೆ ಮುರಿ ಕಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಹುದಲಿ ಗ್ರಾಮದಲ್ಲಿ ಮೊನ್ನೆಯಷ್ಟೆ ಮುತ್ತಣ್ಣ ಗುಡುಬಲಿ ಎಂಬ 22 ವರ್ಷದ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು. ತೀವ್ರ ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಿಸದೆ ಯುವಕ ಆಸ್ಪತ್ರೆಯಲ್ಲಿ ಅಸುನೀಗಿದ್ದರಿಂದ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಹುದಲಿ ಗ್ರಾಮದ ಮಹೇಶ್ ನಾರಿ, ವಿಶಾಲ್ ನಾರಿ, ಸಿದ್ದಪ್ಪ ಮುತ್ತೆನ್ನವರ್, ಬಂಧಿತರ ಆರೋಪಿಗಳಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಒಂದೇ ದಿನದಲ್ಲಿ ಮಾರಿಹಾಳ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











