ಬೆಳಗಾವಿಬೆಳಗಾವಿ ನಗರ

ವಿಚಾರಾಣಧೀನ ಕೈದಿ ಸಾವು ಸಿಬಿಐ ತನಿಖೆಯಾಗಲಿ ಟೋಪಣ್ಣವರ ಆಗ್ರಹ 

ಬೆಳಗಾವಿ: ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆ ತಂದಿದ್ದ ಬಸನಗೌಡ ಪಾಟೀಲ ಮೃತಪಟ್ಟಿದ್ದು ನಾನಾ ಅನುಮಾನಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಮುಖಂಡ  ರಾಜೀವ ಟೋಪಣ್ಣವರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಲ್ಲದಬಾಗೇವಾಡಿಯ 45 ವರ್ಷದ ಬಸನಗೌಡ ಪಾಟೀಲ ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿಯೇ ಮೃತಪಟ್ಟಿದ್ದಾನೆ ಎನ್ನುವ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ. ನಗರ ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಬದಲು ಸಿಬಿಐ ತನಿಖೆ ನಡೆಸಿ ಬಸನಗೌಡ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ.
ಗಾಂಜಾ ಪ್ರಕರಣದ ಹಿನ್ನೆಲೆಯಲ್ಲಿ ಬೆಲ್ಲದ ಬಾಗೇವಾಡಿಯಿಂದ ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಿದ್ದ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಅಸ್ವಸ್ಥಗೊಂಡರು. ಬಳಿಕ ಪೊಲೀಸರು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾನೆ. ಪೊಲೀಸರ ವಶದಲ್ಲಿದ್ದಾಗ ಬಸನಗೌಡ ಮೃತಪಟ್ಟಿರುವ ಶಂಕೆ ಇದೆ. ಇದನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇದರ ಬದಲು ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕೆಂದು ಟೋಪಣ್ಣವರ ಒತ್ತಾಯಿಸಿದ್ದಾರೆ.
TV24 News Desk
the authorTV24 News Desk

Leave a Reply