ಜಿಲ್ಲೆಬೆಳಗಾವಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹೊತ್ತಿ ಉರಿದ ಬಟ್ಟೆ ಅಂಗಡಿ: ಚಿಕ್ಕೋಡಿಯಲ್ಲಿ ಘಟನೆ!!

ಚಿಕ್ಕೋಡಿ ಪಟ್ಟಣದ ಗುರುವಾರ ಪೇಟೆಯಲ್ಲಿ ಬಟ್ಟೆ ಅಂಗಡಿಗೆ ಬೆಂಕಿ ಹತ್ತಿಕೊಂಡಿರುವುದು.

ಬೆಳಗಾವಿ:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಗುರುವಾರ ಪೇಟೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅದೃಷ್ಟ ಮವಷಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಸಹ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿವೆ. ಹೌದು ಚಿಕ್ಕೋಡಿ ಪಟ್ಟಣದ ಗುರುವಾರ ಪೇಟೆಯಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ನೋಡ ನೋಡುತ್ತಲೇ ಅಗ್ನಿಜ್ವಾಲೆ ಅಂಗಡಿಗೆಲ್ಲ ಆವರಿಸಿತ್ತು. ಸ್ಥಳೀಯರು ಏನಾಗುತ್ತಿದೆ ಎಂದು ನೋಡುತ್ತಲೇ ಬೆಂಕಿಯ ಕೆನ್ನಾಲಗೆಗೆ ಇಡೀ ಅಂಗಡಿಯೇ ಭಸ್ಮವಾಗಿ ಹೋಗಿದೆ. ಭಸ್ಮವಾದ ಅಂಗಡಿ ಚಿಕ್ಕೋಡಿ ಪಟ್ಟಣದ ಉದ್ಯಮಿ ಜಯಶ್ರೀ ಯಾದವ್ ಅವರಿಗೆ ಸೇರಿದ್ದು ಎನ್ನಲಾಗಿದೆ.ಅಂಗಡಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಜನ ಆತಂಕದಲ್ಲಿದ್ದರು, ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂಧಿಗೆ ವಿಷಯ ತಿಳಿಸಿದ ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂಧಿ ಬಂದು ಸುಮಾರು ಮೂರು ವಾಹನಗಳನ್ನು ಬೆಂಕಿ ಆರಿಸಲು ಬಳಸಿ ಒಂದು ಗಂಟೆ ಸತತ ಪ್ರಯತ್ನದ ನಂತರ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರು ಅಂಗಡಿಯಲ್ಲಿದ್ದ ಬಟ್ಟೆಗಳು ಹಾಗೂ ಇತರೆ ಸಲಕರೆಣಗಳು ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಸಕಲರಣೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಚಿಕ್ಕೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TV24 News Desk
the authorTV24 News Desk

Leave a Reply