ಬೆಳಗಾವಿ:
ಜನರಿಗೆ ಮೂಲಸೌಕರ್ಯ ಒದಗಿಸದ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೈಲಹೊಂಗಲದ ಒಟ್ಟು 6 ಅಧಿಕಾರಿಗಳ ವಿರುದ್ದ ದೂರು ದಾಖಲಾಗಿದ್ದು ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ7(2) ಕಲಂ9(2)ರನ್ವಯ ದೂರು ದಾಖಲಾಗಿದೆ.ಬೈಲಹೊಂಗಲ ಉಪವಿಭಾಗಾಧಿಕಾರಿ, ತಹಶೀಲ್ದಾರ್,ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ,ನಗರಸಭೆ ಆಯುಕ್ತರು ಹಾಗೂ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.
ಬೈಲಹೊಂಗಲದಲ್ಲಿ ಪಟ್ಟಣದಲ್ಲಿ ಇತ್ತಿಚಿಗೆ ಭಾರಿ ಮಳೆ ಸುರಿದು ಅವಾಂತರವೇ ಸೃಷ್ಟಿಯಾಗಿತ್ತು.
ಮಳೆ ನೀರು ಮನೆಗಳಿಗೆ ನುಗ್ಗಿ 5 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು.ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಇದ್ದಕ್ಕೆ ಮನೆಗಳಿಗೆ ನೀರು ನುಗ್ಗಿತ್ಯು. ಅಲ್ಲದೇ ಇದನ್ನು ಖಂಡಿಸಿ ಮಳೆಯ ನೀರಲ್ಲಿಯೇ ಕುಳಿತು ಈಶ್ವರ್ ಶಿಲೇದಾರ್ ಎಂಬುವವರು ಪ್ರತಿಭಟಿಸಿದ್ದರು.ಇದು ಮಾಧ್ಯಮಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗಿತ್ತು. ಇದು ಸುದ್ದಿಯಾದ ಬೆನ್ನಲ್ಲೆ ಸ್ಥಳಕ್ಕೆ ಲೋಕಾಯುಕ್ತ ಉಪಾಧೀಕ್ಷ ಬಿ ಎಸ್ ಪಾಟೀಲ್ ತೆರಳಿ ತನಿಖಾ ವರದಿಯನ್ನು ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದರು. ಸದ್ಯ ಅವರು ಸಲ್ಲಿಸಿರುವ ವರದಿಯನ್ನಾಧಿರಿಸಿ ಆರು ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ಅಲ್ಲದೇ
ಜುಲೈ 27 ರಂದು ಖುದ್ದು ಅಧಿಕಾರಿಗಳಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.ಲೋಕಾಯುಕ್ತ ಅಧಿಕಾರಿಗಳಿಂದ ಬೈಲಹೊಂಗಲದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.
ಜನರಿಗೆ ಅವರು ವಾಸಿಸುವ ಸ್ಥಳದಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಿಕೊಡುವುದು ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಕರ್ತವ್ಯ ಎಂದು ಸುಪ್ರಿಂ ಕೋರ್ಟ್ ಕೂಡ ಹೇಳಿದೆ ಆದರೆ ಅಧಿಕಾರಿಗಳು ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಲೋಕಾ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರನ್ನು ಕರ್ನಾಟ ಲೋಕಾಯುಕ್ತ ಕಾಯ್ದೆಯಡಿ ದಾಖಲಿಸಿಕೊಂಡಿದ್ದು ಸದ್ಯ ಜನರಿಗೆ ಮೂಲಸೌಕರ್ಯ ಒದಗಿಸದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಲೋಕಾಯುಕ್ತ ಅಧಿಕಾರಿಗಳು ಸಜ್ಜಾಗಿದ್ದಾರೆ.











