Uncategorized

ಅಂಗಡಿಗೆ ನುಗ್ಗಿ ಚಿನ್ನ ಕದ್ದರಾ ಮಹಿಳೆಯರು? ಕಂಬಕ್ಕೆ ಕಟ್ಟಿ ಹೊಡೆದ ಸ್ಥಳೀಯರು ವಿಡಿಯೋ ವೈರಲ್!

ಬೆಳಗಾವಿ:

ಚಿನ್ನದ ಖರಿದೀಸುವ ನೆಪದಲ್ಲಿ ಕಳ್ಳತನಕ್ಕೆ ಯತ್ನ ಮಾಡಿದ ಆರೋಪ ಹೊರಿಸಿ ಸ್ಥಳಿಯರು ಇಬ್ಬರು ಮಹಿಳೆಯರಿಗೆ ಧರ್ಮದೇಟು ನೀಡಿದ ಘಟನೆ
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ನಡೆದಿದೆ.ಕಂಬಕ್ಕೆ ಕಟ್ಟಿಹಾಕಿ ಇಬ್ಬರು ಮಹಿಳೆಯರಿಗೆ ಗ್ರಾಮದ ಮಹಿಳೆಯರು ಥಳಿಸಿರುವ ವಿಡಿಯೋ ವೈರಲ್ ಆಗಿದೆ.ಗ್ರಾಮದ ಜ್ಯುವೆಲರಿ ಅಂಗಡಿಯಲ್ಲಿ ಮಹಿಳೆಯರು ಕಳ್ಳತನಕ್ಕೆ ಯತ್ನಿಸಿದ ಆರೋಪ ಕೇಳಿ ಬಂದಿದೆ.ಇದೆ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಜ್ಯುವೆಲರಿ ಶಾಪನಲ್ಲಿ ಚಿನ್ನಾಭರಣ ಕಳವು ಮಾಡಿದ್ದರು ಎಂದು ಸ್ಥಳೀಯರು ಆರೋಪಿಸಿದ್ದು ಕದ್ದ ಚಿನ್ನ ಬಾಯಲ್ಲಿ ಇಟ್ಟುಕೊಂಡು ಮಹಿಳೆಯರು ಎಸ್ಕೇಪ್ ಆಗಲು ಯತ್ನಿಸಿದ್ದರು ಎನ್ನಲಾಗಿದೆ‌.ಮಹಿಳೆಯರು ಎಸ್ಕೇಪ್ ಆಗುತ್ತಿದ್ದ ವೇಳೆ ಅವರನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ.ಕಳ್ಳತನಕ್ಕೆ ಯತ್ನಸಿ ಸಿಕ್ಕಿಬಿದ್ದ ಮಹಿಳೆಯರನ್ನ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿಗಳನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.ಘಟನೆಯು ಯರಗಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

TV24 News Desk
the authorTV24 News Desk

Leave a Reply