Uncategorized

ಬ್ರೇಕ್ ಫೇಲ್ ಆಗಿ ಕಾರು ಪಲ್ಟಿ ಸ್ಥಳದಲ್ಲಿಯೇ ಇಬ್ಬರ ಸಾವು ಇಬ್ಬರಿಗೆ ಗಾಯ!

ಬೆಳಗಾವಿ:

ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದ್ದರಿಂದ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ಮೇಲೆ ನಡೆದಿದೆ. ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ನಿವಾಸಿಗಳಾದ ರಾಜು ಪಾಟೀಲ್,ಶೀಲಾ ಘಾಟೆ,ಪ್ರದೀಪ್ ಘಾಟೆ, ಹಾಗೂ ಮೋಹನ್ ಘಾಟೆ‌ ಕಾರ್ಯ ನಿಮಿತ್ತವಾಗಿ ಗೋಕಾಕ ತಾಲೂಕಿನ ಘಟಪ್ರಭಾಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ರಾಜು ಪಾಟೀಲ್ ಮತ್ತು ಶೀಲಾ ಘಾಟೆ ಸ್ಥದಲ್ಲಿಯೇ ಸಾವನ್ನಪ್ಪಿದ್ದರೆ ಪ್ರದೀಪ್ ಹಾಗೂ ಮೋಹನ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಗಳುಗಳನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TV24 News Desk
the authorTV24 News Desk

Leave a Reply