Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಧಾರವಾಡ

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಬಸ್ 

ಹುಬ್ಬಳ್ಳಿ : ಪೂನಾದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದು ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕಾರವಾರ ರಸ್ತೆಯಲ್ಲಿ ನಡೆದಿದೆ.ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌ . ಕಾರವಾರ ರಸ್ತೆಯ ಬಳಿ ಶನಿವಾರ ರಾತ್ರಿ 2.45 ರ ಸುಮಾರಿಗೆ ರೇಷ್ಮಾ ಟ್ರಾವೆಲ್ಸ್ ಕಂಪನಿಗೆ ಸೇರಿದ ಖಾಸಗಿ ಬಸ್ ನಿನ್ನೆ ಪೂನಾ ದಿಂದ ಉಡುಪಿಯತ್ತ ಹೋಗುತ್ತಿದ್ದಾಗ ಹುಬ್ಬಳ್ಳಿ-ಧಾರವಾಡ ಬೈಪಾಸ ಬಳಿಯ ಕಾರವಾರ ರಸ್ತೆಯ ಬಳಿ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಸ್ ಚಾಲಕ ಬಸ್ ನಿಲ್ಲಿಸಿ, ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ.ನೋಡು ನೋಡುತ್ತಿದ್ದ ಹಾಗೆ ಬೆಂಕಿ ಸಂಪೂರ್ಣವಾಗಿ ಬಸ್ಸಿಗೆ ಆವರಿಸಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ,ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಂತಾಗಿದ್ದು,ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
TV24 News Desk
the authorTV24 News Desk

Leave a Reply

error: Content is protected !!