


ಬೆಳಗಾವಿ:
ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕಣಗಳನ್ನು ಪೊಲೀಸರು ಭೇದಿಸಿದ್ದು ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಡಿದ್ದಾರೆ. ಬಂಧಿತ ಆರೋಪಿಗಳಿಂದ 9 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಲ್ಲದೇ ಮಾರುತಿ ಸುಜುಕಿ ಕಂಪನಿಯ ಒಂದು ಎರ್ಟಿಗಾ ಕಾರ್ ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅವರಾದಿ ಗ್ರಾಮದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ತಾಲೂಕು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾ ಆನಂದ ಪುರದ ಎಂಬುವವರ ಮನೆಯ ಮೇಲ್ಛಾವಣಿ ಹಂಚುಗಳನ್ನು ತೆಗೆದು ಕಳವು ಮಾಡಲಾಗಿತ್ತು. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನಾಧರಿಸಿ ಪತ್ರಯ್ಯ ನಿಂಗಯ್ಯ ಹಿರೇಮಠ ಹಾಗೂ ಅನೀಲ್ ಕುಮಾರ್ ಪ್ರಭುಸ್ವಾಮಿ ಹಿರೇಮಠ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೈಲಹೊಂಗಲ ಠಾಣಾ ವ್ಯಾಪ್ತಿಯ ಸಂಗೊಳ್ಳಿ ಗ್ರಾಮದಲ್ಲೂ ಸಹ ಕಳ್ಳತನ ಮಾಡಿದ್ದನ್ನು ಪೊಲೀಸರ ತನಿಖೆಯಲ್ಲಿ ಒಪ್ಪಿಕೊಂಡಿದ್ದು ಎರಡೂ ಠಾಣೆಗಳಲ್ಲಿ ಇಬ್ಬರು ಆರೋಪಿಗಳ ಮೇಲೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.









