

ಬೆಳಗಾವಿ:
ಚಲಿಸುತ್ತಿದ್ದ ಕಾರಿಗೆ ದಿಢೀರ್ ಬೆಂಕಿ ಹತ್ತಿಕೊಂಡು ಒಂದು ಕ್ಷಣ ಎಲ್ಲರನ್ನೂ ಆತಂಕಕ್ಕೆ ದೂಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಡು ಸ್ವಿಫ್ಟ್ ಕಾರು ಭಸ್ಮವಾಗಿದೆ.ಬೆಳಗಾವಿ ನಗರದ ರಾಮದೇವ್ ಹೋಟೆಲ್ ಎದುರು ಡಿ-ಮಾರ್ಟ್ ಕಾರ್ನರ್ ರಸ್ತೆಯಲ್ಲಿ ಘಟನೆ ನಡೆದಿದ್ದು ಎಂಜಿನ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಒಳಗಿದ್ದ
ಚಾಲಕ ಹಾಗೂ ಪ್ರಯಾಣಿಕರು ಕೆಳಗಿಳಿದಿದ್ದಾರೆ.ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ಒಂಂದು ತಪ್ಪಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ ಶಂಕೆ ಇದ್ದು ಘಟನೆಯಿಂದ ಕೆಲಕಾಲ ಸಂಚಾರ ದಟ್ಟಣೆ ನಿರ್ಮಾಣವಾಗಿ ಸ್ಥಳದಲ್ಲಿ ಜನರು ಜಮಾವಣೆಯಾದ ಘಟನೆಯೂ ಸಹ ನಡೆದಿದೆ.ಬೆಳಗಾವಿ ಪಾಸಿಂಗ್ ಹೊಂದಿದ್ದ ಸ್ವಿಫ್ಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










