



ಬೆಳಗಾವಿ:
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಸದ್ಯ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಿರಂತರ ಮಳೆಗೆ ನೆನೆದು ಮನೆಯ ಗೋಡೆಯೊಂದು ಕುಸಿದ ಘಟನೆ ನಡೆದಿದೆ.ಜೋಡಕುರಳಿ ಗ್ರಾಮದ ಗಂಗವ್ವ ವರಾಳೆ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದು ಅಚಾತುರ್ಯ ಸಂಭವಿಸಿದೆ. ಅದೃಷ್ಟವಷಾತ್ ಮನೆಯ ಗೋಡೆ ಹೊರಭಾಗದಲ್ಲಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಏಳು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದ್ದು ಮನೆಯ ಸದಸ್ಯರು ಸರ್ಕಾರದಿಂದ ಸೂಕ್ತ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.









