

ಬೆಳಗಾವಿ:
ಬೆಳಗಾವಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಹತ್ತಿರ ಭಾರಿ ಗಾತ್ರದ ನೀಲಗಿರಿ ಮರವೊಂದು ಧರೆಗುರುಳಿದ ಘಟನೆ ಇಂದು ನಡೆದಿದೆ.
ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋರಿಕ್ಷಾವೊಂದರ ಮೇಲೆ ಈ ಮರ ಬಿದ್ದಿದ್ದು, ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಭಾರಿ ಗಾತ್ರದ ಮರ ಮತ್ತು ಅದರ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಮರವನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ.










