ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ ನಿನ್ನೆ ನಿಧನ ಹೊಂದಿದ್ದಾರೆ. ಸೋಮವಾರ ರಾತ್ರಿ 7.30ರ ಸುಮಾರಿಗೆ ನಿಧನರಾದರು. ಕನ್ನಡದಲ್ಲಿ ಗರ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಿಗೆ ಮುರಳಿ ಕೃಷ್ಣ ಆಕ್ಷನ್ ಕಟ್ ಹೇಳಿದ್ದರು. ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಮುರಳಿ ಕೃಷ್ಣ ಅವರು ಬ್ರೈನ್ ಟ್ಯೂಮರ್ ಶಸ್ತ್ರಚಿಕಿತ್ಸೆ ಬಳಿಕ ಹೃದಯಾಘಾತದಿಂದ ನಿಧನಹೊಂದಿದ್ದಾರೆ ಎಂದು ಕುಟುಂಬದವರು ಮಾಹಿತಿ ತಿಳಿಸಿದ್ದಾರೆ.
tv24plus.in > Blog > ರಾಜ್ಯ > ನಿರ್ದೇಶಕ ಮುರಳಿ ಕೃಷ್ಣ ನಿಧನ








