ಬೆಳಗಾವಿ:
ಯಕ್ಸಂಬಾ ಪಟ್ಟಣದಲ್ಲಿದ್ದಫರ್ನಿಚರ್ ಗೃಹೋಪಯೋಗಿ ವಸ್ತುಗಳ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಇಡೀಯ ಗೋದಾಮು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಸಹ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.ಮಾಣಿಕ್ ವಡಗಾಂವಿ ಎಂಬುವವರಿಗೆ ಸೇರಿದ ಗೋದಾಮು ಇದಾಗಿದ್ದು ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಬಳಕೆ ಗೃಹವಸ್ತುಗಳು ಪರಿಕರಗಳು ಬೆಂಕಿಯ ಕೆನ್ನಾಲಗೆಗೆ ಸುಟ್ಟು ಭಸ್ಮವಾಗಿದ್ದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ನಾಲ್ಕು ವಾಹನಗಳನ್ನು ಬಳಸಿ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಆರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














