Uncategorized

ರಾಜ್ಯ ಸರ್ಕಾರದ ವಿರುದ್ದ ಬೆಳಗಾವಿಯಲ್ಲಿ ಬಿಜೆಪಿ ಬಟಾಲಿಯನ್ ದಿಕ್ಕಾರ ದಿಕ್ಕಾರ!

ಬೆಳಗಾವಿ:
ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯ್ತು.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬಾರಕೋಲ ಹಿಡಿದು ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರಹಾಕಲಾಯ್ತು.ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ
ಖಾನಾಪುರದ ಶಾಸಕ ವಿಠ್ಠಲ ಹಲಗೇಕರ್, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌರಡ್ ಹಾಗೂ ಮಾಜಿ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಸೇರಿ ಬಿಜೆಪಿ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು.ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾದ ರೈತ ಪರವಾದ ಯೋಜನೆಗಳಿಲ್ಲ.
ಮಳೆಯಿಂದ ಹಾನಿಯಾದ ಬೆಳೆನಾಶಕ್ಕೆ ಈವರೆಗೂ ರಾಜ್ಯ ಸರ್ಕಸರ ಪರಿಹಾರ ನೀಡಿಲ್ಲ.
ರೈತರ ಸಂಕಷ್ಟ ಆಲಿಸಲು ರಾಜ್ಯದಲ್ಲಿ ಕೃಷಿ ಸಚಿವರಿಲ್ಲ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೇ ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನೂ ನೀಡಿಲ್ಲ.ಬಿಡದಿ ಟೌನಶಿಪ್ ಹೆಸರಿನಲ್ಲಿ ರೈತರ ಜಮೀನು ಲೂಟಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಅವರು ಆರೋಪಿಸಿದರು.ಸರ್ಕಾರದ ನಿರ್ಲಕ್ಷ್ಯದಿಂದ ರೈತರ ಆತ್ಮಹತ್ಯೆ ಹೆಚ್ಚಳವಾಗ್ತಿದೆ ಎಂದರು.ಇದೇ ವೇಳೆ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಧಿಕ್ಕಾರ ಕೂಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

TV24 News Desk
the authorTV24 News Desk

Leave a Reply

error: Content is protected !!