ಬೆಳಗಾವಿ:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕ ಬಾಗೇವಾಡಿಯಲ್ಲಿ ಮಂಗಗಳ ಕಾಟಕ್ಕೆ ಗ್ರಾಮಸ್ಥರು ಹೈರಾಣಾಗಿದ್ದಾರೆ.ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮಂಗಗಳ ಕಾಟಕ್ಕೆ ಜನ ಬೇಸತ್ತಿದ್ದು ಗ್ರಾಮದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದರಿಂದ ಜನ ಮನೆ ಬಿಟ್ಟು ಹೊರಗೆ ಬರದ ಸ್ಥಿತಿ ನಿರ್ಮಾಣವಾಗಿದೆ. ಜಮೀನಿಗಳಿಗೆ ನುಗ್ಗಿ ಬೆಳೆ ಹಾನಿ ಒಂದು ಕಡೆಯಾದರೆ ಮತ್ತೊಂದು ಕಡೆ ಮನೆಯ ಮೇಲ್ಚಾವಣಿಗಳ ಮೇಲೆರಿ ಮಂಗಗಳು ಹಾನಿ ಉಂಟು ಮಾಡುತ್ತಿವೆ.ಮನೆಗಳ ಮೇಲೆ ಮಂಗಗಳ ಕಾಟಕ್ಕೆ ಮನೆಯ ಹಂಚು ಒಡೆದು ಹೋಗುತ್ತಿವೆ ಎಂದು ಗ್ರಾಮಸ್ಥರ ಆಕ್ರೋಶ ಹೊರ ಹಾಕಿದ್ದಾರೆ.ಕೃಷಿ ಮಾಡುತ್ತಿರುವ ರೈತರಿಗಂತೂ ಮಂಗಗಳ ಕಾಟ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ರೈತರು ಜಮೀನುಗಳಲ್ಲಿ ಬೆಳೆದಿರುವ ಸೋಯಾಬಿನ್ ಸೇರಿ ಅನೇಕ ಬೆಳೆಗಳನ್ನ ಹಾಳು ಮಂಗಗಳು ಮಾಡುತ್ತಿವೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಮಂಗಗಳ ಕಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.













