ಬೆಳಗಾವಿ:
ರೈತರಿಗೆ ಬೆಳೆ ವಿಮೆ ಹಾಗೂ ಬರ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಮುಖಂಡರು ಹಾಗೂ ಕಾರ್ಯಕರ್ತರು ಸವದತ್ತಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರ್ಯಾಲಿ ನಡೆಸಿದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರದಿಂದ ಸೂಕ್ತ ನೆರವು ದೊರೆಯುತ್ತಿಲ್ಲ ಎಂದು ಆರೋಪಿಸಿದರು ಮಳೆ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಬೆಳೆ ವಿಮೆ ಹಾಗೂ ಬರ ಪರಿಹಾರವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು ರ್ಯಾಲಿಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಳಿಕ ತಹಶೀಲ್ದಾರರ ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಬೆಳೆ ವಿಮೆ ಮತ್ತು ಬರ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ಸರ್ಕಾರ ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.













