ಬೆಳಗಾವಿ:
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ ಹಿನ್ನೆಲೆ ತೀವ್ರ ಯುವಕರ ಮಧ್ಯೆ ಗಲಾಟೆ ನಡೆದಿದೆ.ಎರಡು ಗ್ರಾಮಗಳ ವಿದ್ಯಾರ್ಥಿಗಳು ಪರಸ್ಪರ ದೊನ್ನೆ ಹಾಗೂ ಬೆಲ್ಟಗಳಿಂದ ಹೊಡೆದಾಡಿಕೊಂಡಿದ್ದಾರೆ.ಬೆಳಗಾವಿ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಘಟನೆ ನಡೆದ್ದು ಗಲಾಟೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಬಸ್ ಚಲಿಸುತ್ತಿದ್ದ ವೇಳೆಯಲ್ಲಿಯೇ ಯುವಕರ ಮಧ್ಯೆ ಗಲಾಟೆ ಆರಂಭಾಗಿದೆ ಎನ್ನಲಾಗಿದೆ.ಜಕ್ಕಬಾಳ ಹಾಗೂ ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ.ಬಸ್ ನಲ್ಲಿ ಈ ರೀತಿಯ ಕಿರುಕುಳಕ್ಕೆ ಕಡಿವಾಣ ಹಾಕಲು ಯುವಕರು ಒತ್ತಾಯಿಸಿದ್ದಾರೆ.ಕೂಡಲೇ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಾರದ ಪೊಲೀಸರ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬೆಲ್ಟ್,ಕಲ್ಲು,ಕಟ್ಟಿಗೆಯಿಂದ ಹೊಡೆದಾಡಿಕೊಂಡ ಯುವಕರ ದೃಶ್ಯಗಳು ಎದೆ ಝೆಲ್ಲೆನಿಸುವಂತಿವೆ.ಯುವಕರ ಗಲಾಟೆ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಮಾಹಿತಿ ನೀಡಿದರು ಸ್ಥಳಕ್ಕೆ ಬಾರದ ಪೊಲೀಸರ ವಿರುದ್ದ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು
ಸ್ಥಳಕ್ಕೆ ಭೇಟಿ ನೀಡಿ ಯುವಕರನ್ನು ಸಮಾಧಾನಪಡಿಸುವ ಕೆಲಸವನ್ನು ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಮಾಡಿದ್ದು ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದ್ದಾರೆ.
ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸೌಜನ್ಯಕ್ಕೂ ಸ್ಥಳಕ್ಕೆ ಬಾರದ ಪೊಲೀಸರ ವಿರುದ್ಧ ಯುವಕರು ಹಾಗೂ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.















