Uncategorized

ರಣಾಂಗಣವಾದ ಕಾಂಗ್ರೇಸ್ ಕಚೇರಿ ಪರಸ್ಪರ ಹೊಡೆದಾಡಿಕೊಂಡ ಕಾರ್ಯಕರ್ತರು!

ಬೆಳಗಾವಿ:

ಬೆಳಗಾವಿ: ಕಾಂಗ್ರೆಸ್ ನಗರ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗದ್ದಲ ಗಲಾಟೆ ಉಂಟಾಗಿ ಹೊಡೆದಾಟ ಆಗಿದೆ.

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರು ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು.‌ ಈ ಸಭೆಯಲ್ಲಿ ಮಾಜಿ ಶಾಸಕ ರಮೇಶ್ ಕುಡಚಿ ಆಪ್ತ ಹೇಮಂತ್ ಲಿಂಗಾಡೆ ಎಂಬಾತನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬೆಳಗಾವಿ ನಗರಾಧ್ಯಕ್ಷ ಸ್ಥಾನದ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದ್ದ ವೇಳೆ ಅಭಿಪ್ರಾಯ ಸಂಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ರಮೇಶ ಕುಡಚಿ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.ಈ ವೇಳೆ ಮಾತಿಗೆಮಾತು ಬೆಳೆದು ಗಲಾಟೆ ಆರಂಭವಾಗಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಹೇಮಂತ್ ಲಿಂಗಾಡೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಳಿಕ ಮಾರ್ಕೆಟ್ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆಲಕಾಲ ಕಾಂಗ್ರೆಸ್ ಕಚೇರಿಯಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ.

TV24 News Desk
the authorTV24 News Desk

Leave a Reply

error: Content is protected !!