ಬೆಳಗಾವಿ:
ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ.ಇಡೀ ದಿನ ಬೆಳಗಾವಿ ಮಹಾನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಚಿವ ಡಾ.ಯತೀಂದ್ರ ಭಾಗಿಯಾಗಲಿದ್ದಾರೆ.ಬೆಳಗ್ಗೆ 10 ಗಂಟೆಗೆ ಬೆಳಗಾವಿ ನಗರಕ್ಕೆ ಡಾ. ಯತೀಂದ್ರ ಆಗಸಲಿದ್ದು ಬೆಳಗ್ಗೆ 10.30 ಕ್ಕೆ ಸುವರ್ಣ ವಿಧಾನಸೌಧದಲ್ಲಿ ಪಾಲಿಕೆ, ಬುಡಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.ಮಧ್ಯಾಹ್ನ 12.30 ಕ್ಕೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.ಬಳಿಕ ಮಧ್ಯಾಹ್ನ 3 ಗಂಟೆಗೆ ಪಾಲಿಕೆ ಮತ್ತು ಬುಡಾದಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ.ಸಂಜೆ 5.30 ಕ್ಕೆ ಖಾಸಗಿ ಹೊಟೇಲ್ ನಲ್ಲಿ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.ಪ್ರಮುಖವಾಗಿ ಖಾಸಗಿ ಹೊಟೇಲ್ ನಲ್ಲಿ ಅಹಿಂದ ಮುಖಂಡರ ಸಭೆ ನಡೆಸಲಿದ್ದಾರೆ. ಒಟ್ಟಾರೆಯಾಗಿ ಡಾ ಯತೀಂದ್ರ ಇಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದು ನಾಳೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.











