


ಬೆಳಗಾವಿ:
ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಶಿವರಾಮೇಗೌಡ ಬಣದಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಹೋರಾಟಗಾರು ಮಳೆಯಲ್ಲೇ ಅರೆಬೆತ್ತಲೆಯಾಗಿ ಪ್ರತಿಭಟಿಸಿದರು.ಜಿಲ್ಲಾದ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಉರುಳು ಸೇವೆ ಮಾಡಿದರು.ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಅರೆಬೆತ್ತಲೆ ಪ್ರತಿಭಟಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾವೇರಿ ನಮ್ಮದು,ಮಹದಾಯಿ ನಮ್ಮದು,ಕಷ್ಣಾ ನಮ್ಮದು ಅಡಿಬರಹದ ಖಾಲಿ ಬಿಂದಿಗೆ ಹಿಡಿದು ವಿನೂತನವಾಗಿ ಪ್ರತಿಭಟಿಸಲಾಯ್ತು.ನಮ್ಮ ನೀರು ನಮ್ಮ ಹಕ್ಕು ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.ಇದೇ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ಕರ್ನಾಟಕದಲ್ಲಿ ವಾಡಿಕೆಗಿಂತ ಮಳೆ ಕೊರತೆ ಆಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಬಾರದು ಎಂದು ಆಗ್ರಹಿಸಿದರು. ನೀರು ಬಿಡುಗಡೆ ಮಾಡಿದ್ರೆ ಆ.13ರಂದು ಬೆಳಗಾವಿ ಬೆಳಗಾವಿಯನ್ನು ಸಂಪೂರ್ಣವಾಗಿ ಬಂದ್ ಮಾಡೋದಾಗಿ ಎಚ್ಚರಿಕೆ ನೀಡಿದರು.








