Uncategorized

ಇಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪ್ರವಾಸ!ಎಲ್ಲೆಲ್ಲಿ ಪ್ರವಾಸವಿದೆ ಗೊತ್ತಾ!

ಬೆಳಗಾವಿ:

ಬೆಳಗಾವಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ‌ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಬರ ಪ್ರದೇಶಗಳ ಪರಿಶೀಲನೆ ಆರಂಭಿಸಲಿರುವ ಸಚಿವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕುರುಬಗಟ್ಟಿಯಿಂದ ತಮ್ಮ ಬರಪ್ರವಾಸ ಪ್ರಾರಂಭಿಸಲಿದ್ದಾರೆ. ಉಸ್ತುವಾರಿ ಸಚಿವರಿಗೆ ಸ್ಥಳೀಯ ನಾಯಕರು ಮುಖಂಡರು ಹಾಗೂ ಶಾಸಕರು ಸಾಥ್ ನೀಡಲಿದ್ದು ಬರ ಪರಿಸ್ಥಿತಿಯ ಕುರಿತು ಸಚಿವರಿಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಲಿದ್ದಾರೆ. ಜಿಲ್ಲೆಯ ಯರಗಟ್ಟಿ, ರಾಮದುರ್ಗ,ಹಾಗೂ ವಸದತ್ತಿ ತಾಲೂಕಿನಲ್ಲಿ ತೀವ್ರ ಬರವಿದ್ದು ಒಂದು ಕಡೆ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿದ್ದರೆ ಮತ್ತೊಂದು ಕಡೆ ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

TV24 News Desk
the authorTV24 News Desk

Leave a Reply

error: Content is protected !!