ಬೆಳಗಾವಿ:
ಕಾಕತಿಯ ಕಾಂಗ್ರೆಸ್ ಕಾರ್ಯಕರ್ತ ಸದಾ ಕಲ್ಲಟ್ಟಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ಸದಾ ಕಲ್ಲಟ್ಟಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದ ಸಚಿವರು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸಲಹೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿ ಸೇವಿಸುವುದರ ಜೊತೆಗೆ, ಸಮರ್ಪಕವಾಗಿ ವಿಶ್ರಾಂತಿ ಹಾಗೂ ನಿದ್ರೆ ಮಾಡುವಂತೆ ಸೂಚಿಸಿದರು.
ಯಾವುದೇ ಸಮಸ್ಯೆಗಳು ಎದುರಾದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವರು, ಅಗತ್ಯವಿರುವ ಎಲ್ಲ ರೀತಿಯ ಸಹಾಯ ಹಾಗೂ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಸೇರಿದಂತೆ ಕಾಕತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.














