Uncategorized

ಕಿತ್ತೂರು ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ತಳವಾರ ಸೇರಿ 30 ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಬೆಳಗಾವಿ:

ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ ಗೊತ್ತುವಳಿಗೆ ಆಗ್ರಹಿಸಿ ಹೋರಾಟ ನಡೆಸಿದ್ದ ಕಾರ್ಯಕರ್ತರನ್ನು ಬೆಳಗಾವಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆದಿತ್ತು. ಇಂದು ಮುಂಜಾನೆಯಿಂದಲೇ ಕನ್ನಡಪರ ಹೋರಾಟಗಾರರು ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎನ್ನುವ ಗೊತ್ತುವಳಿ ಮಂಡನೆ ಮಾಡಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ಶುರು ಮಾಡಿದ್ದರು.ಸದ್ಯ ಬೆಳಗಿನಿಂದ ಹೋರಾಟಕ್ಕಿಳಿದ ಕಾರ್ಯಕರ್ತರು ಹಾಗೂ ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ್ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಿತ್ತೂರು ಕರ್ನಾಟಕ ಸಂಘಟನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಇಂದು ಮುಂಜಾನೆಯಿಂದ ಪಾಲಿಕೆಯ ಮುಂದೆ ಸೇರಿ ಪ್ರತಿಭಟನೆ ನಡೆಸಿದ್ದವು.
ಹೋರಾಟಗಾರರನ್ನ ಹೊತ್ತು ವಾಹನದಲ್ಲಿ ಕುಡಿಸುವ ವೇಳೆ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟವೂ ನಡೆದ ಘಟನೆ ಜರುಗಿತು.

TV24 News Desk
the authorTV24 News Desk

Leave a Reply

error: Content is protected !!