


ಬೆಳಗಾವಿ:
ವಸತಿ ಶಾಲೆಯಲ್ಲಿದ್ದು ವ್ಯಾಸಾಂಗ ಮಾಡುತ್ತಿದ್ದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ.
ಬಾಲಕನ ಸಾವಿನಿಂದ ಕಂಗೆಟ್ಟ ಪೋಷಕರ ಆಕ್ರಂದನ ಮುಗಿಲು ಮುಟ್ಟದೆ.ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು ಸುಟ್ಟಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು ಗೌತಮ ಹನುಮಂತ ಭಜಂತ್ರಿ(15) ಎಂದು ಗುರುತಿಸಲಾಗಿದೆ.
ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಗೌತಮ್ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿಯಾಗಿರುವ ಮೃತ ಬಾಲಕ ಗೌತಮ್ ಪೋಷಕರು
ಪುತ್ರನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ.ಇನ್ನು ಶಾಲೆಯಲ್ಲಿರುವ ಶಿಕ್ಷಕರ ಮೇಲೆ ಆರೋಪಿರುವ ಪೋಷಕರು
ಶಿಕ್ಷಕರೇ ತಮ್ಮ ಮಗನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ
ರಾಯಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಾಯಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.











