





ಬೆಳಗಾವಿ:
ಬರಗಾಲ ಘೋಷಣೆ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ಕೈ ಬಿಟ್ಟ ಹಿನ್ನೆಲೆ ಬೆಳಗಾವಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದರು.
ಬೆಳಗಾವಿ ಜಿಲ್ಲಾಧಿಕಾರಿ ಬಳಿ ಸರ್ಕಾರದ ವಿರುದ್ದ ಅನ್ನದಾತರು ಪ್ರತಿಭಟಿಸಿ ಆಕ್ರೋಶಗೊಂಡರು.ಸಿಎಂ ಡಿಕೆ ಶಿವಕುಮಾರ್ ಹಾಗು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರ ಹಾಕಿದರು.ಬೆಳಗಾವಿ ಜಿಲ್ಲೆಯಲ್ಲಿ ಬೆಳೆ ಬಾರದೆ ಅನ್ನದಾತರು ಕೈ ಸುಟ್ಟು ಕೊಂಡಿದ್ದಾರೆ ಬರ ಅಧ್ಯಯನ ತಂಡ ಕಾಟಾಚಾರಕ್ಕೆ ಜಿಲ್ಲೆಗೆ ಭೇಟಿ ನೀಡಿ ಹೋಗಿತ್ತು ಜಿಲ್ಲೆಯ ಜನಪ್ರತಿನಿಧಿಗಳು,ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಜಿಲ್ಲೆಯ ರೈತರು ಬೆಳೆ ಬಾರದೇ ಸಂಕಷ್ಟದಲ್ಲಿದ್ದಾರೆ, ಬರಗಾಲ ಘೋಷಣೆ ಮಾಡಿ ಎಂದು ರೈತರು ಆಗ್ರಹಿಸಿದರು. ಈಗಾಗಾಲೇ ಸಾಲ ಮಾಡಿ ರೈತರು ಬಿತ್ತನೆ ಮಾಡಿದ್ದಾರೆ, ಆದರೆ ಇಳುವರಿ ಬಂದಿಲ್ಲ.
ಬೆಳಗಾವಿ ಜಿಲ್ಲೆ ಬರಗಾಲ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರಕ್ಕೆ ಒತ್ತಾಯ ಮಾಡಬೇಕು
ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರನ್ನು ಬದುಕಿಸುವ ಕೆಲಸ ಮಾಡಬೇಕು ಎಂದು ರೈತರ ಒತ್ತಾಯಿಸಿದರು.
ಜಿಲ್ಲೆಯನ್ನ ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡದೆ ಹೋದರೆ ಉಗ್ರ ಹೋರಾಟ ಮಾಡುವುದಾಗಿ ಇದೇ ವೇಳೆ ರೈತ ಮುಖಂಡರು ಎಚ್ಚರಿಕೆ ನೀಡಿದರು.











