Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಕ್ರೀಡೆ

ಭಾರತ-ನ್ಯೂಜಿಲೆಂಡ್  ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

ವೆಲ್ಲಿಂಗ್ಟನ್: ಭಾರತ ಹಾಗೂ ನ್ಯೂಜಿಲೆಂಡ್  ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನ ಹಸಿಯಾಗಿದ್ದರಿಂದಾಗಿ, ಮೈದಾನ ಆಡಲು ಯೋಗ್ಯವಿಲ್ಲ ಎನ್ನುವುದನ್ನು ತೀರ್ಮಾನಿಸಿದ ಮ್ಯಾಚ್ ರೆಫ್ರಿ, ಪಂದ್ಯ ರದ್ದಾಗಿರುವುದಾಗಿ ಘೋಷಿಸಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇನ್ನೆರಡು ಟಿ20 ಪಂದ್ಯಗಳನ್ನು ಆಡಲಿದೆ. ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಆಸ್ಟ್ರೇಲಿಯಾದಲ್ಲಿ ಇತ್ತೀಚೆಗಷ್ಟೇ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮೀಸ್‌ನಲ್ಲೇ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಉಭಯ ತಂಡಗಳು ಇದೀಗ ಟಿ20 ಸರಣಿಯನ್ನಾಡುತ್ತಿವೆ.

TV24 News Desk
the authorTV24 News Desk

Leave a Reply

error: Content is protected !!