
ಬೆಳಗಾವಿ:
ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ರಕ್ತದಾನ ಮಾಡಲು ಜಿಲ್ಲಾದ್ಯಂತ ಒಟ್ಟು 9123 ಜನ ನೋಂದಣಿ ಮಾಡಿಕೊಂಡಿದ್ದರು. ನಮ್ಮ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ ಎಲ್ಲರ ಸ್ಕ್ರೀನಿಂಗ್ ಮಾಡಿದ್ದು ಅವರಲ್ಲಿ ರಕ್ತಹೀನತೆ, ರಕ್ತದೊತ್ತಡ, ಮದುಮೇಹ, ಥೈರಾಯಿಡ್ ಸಂಬಂಧಿತ ರೋಗಗಳ ಕಾರಣಗಳಿಂದ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ 4489 ಜನರಿಗೆ ರಕ್ತದಾನ ಮಾಡದಂತೆ ಸಲಹೆ ನೀಡಲಾಗಿತ್ತು. ಅವರನ್ನು ಹೊರತುಪಡಿಸಿ ಜಿಲ್ಲಾದ್ಯಂತ ಒಟ್ಟು 4634 ಯುನಿಟ್ ರಕ್ತ ಸಂಗ್ರಹಣೆಯಾಗಿದೆ ಎಂದು ಜಿಲ್ಲಾ ರಕ್ತ ಸುರಕ್ಷತಾ ಅಧಿಕಾರಿ ಡಾ. ಚಾಂದನಿ ದೇವಡಿ ಅವರು ಮಾಹಿತಿ ನೀಡಿದ್ದಾರೆ.
“ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ಜರುಗಿದೆ. ಒಟ್ಟು 4634 ಯುನಿಟ್ ರಕ್ತ ಸಂಗ್ರಹಣೆಯಾಗಿದ್ದು ರಾಜ್ಯದಲ್ಲೇ ದಾಖಲೆಯಾಗಿದೆ. ಇದನ್ನು ಇಂಡಿಯಾ ಬುಕ್ ಆಪ್ ರೆಕಾರ್ಡ್ ಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.








